(ನ್ಯೂಸ್ ಕಡಬ) newskadaba.com, ಮೇ.05: ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಹೊರವಲಯ ನಿಶಾತ್ ಪ್ರದೇಶದಲ್ಲಿ 45 ವರ್ಷದ ಅಲೆಮಾರಿ ಮಹಿಳೆಯ ಮೇಲೆ ನಾಲ್ವರು ಪುರುಷರು ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಈ ಘಟನೆಯು ಕಣಿವೆಯಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗಳ ವಿರುದ್ಧ ತ್ವರಿತ ಕ್ರಮಕ್ಕೆ ಬೇಡಿಕೆಗಳು ಹೆಚ್ಚಾಗುತ್ತಿವೆ.

ವಾಟರ್ ವರ್ಕ್ಸ್ ರಸ್ತೆಯ ನಿಶಾತ್ ಬಳಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕಾನೂನಿನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಅಪರಾಧದಲ್ಲಿ ಭಾಗಿಯಾಗಿರುವ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ, ”ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವಕ್ತಾರರು ತಿಳಿಸಿದ್ದಾರೆ.
ಮಹಿಳೆ ಅಲೆಮಾರಿ ಬಕರ್ವಾಲ್ ಸಮುದಾಯಕ್ಕೆ ಸೇರಿದ್ದು, ಆಕೆ ಸಮುದಾಯದ ಇತರ ಸದಸ್ಯರೊಂದಿಗೆ ಒಂದು ವಾರದ ಹಿಂದೆ ತಮ್ಮ ಜಾನುವಾರುಗಳೊಂದಿಗೆ ರಿಯಾಸಿ ಜಿಲ್ಲೆಯಿಂದ ವಲಸೆ ಬಂದಿದ್ದರು. ನಾವು ಬೇಸಿಗೆ ಮತ್ತು ಚಳಿಗಾಲದಲ್ಲಿ ಈ ಸ್ಥಳಕ್ಕೆ ವಲಸೆ ಹೋಗಿ ನಂತರ ವಾಪಸ್ಸಾಗುತ್ತೇವೆ ಎಂದು ಅವರ ಮಗ ಹೇಳಿದರು.