ಭದ್ರತಾ ಪಡೆಗಳ ಕಾರ್ಯಾಚರಣೆ: ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ವಶಕ್ಕೆ

(ನ್ಯೂಸ್ ಕಡಬ) newskadaba.com, ಮೇ.06: ಐಎಸ್‌ಐ ಬೆಂಬಲಿತ ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಮಂಗಳವಾರ ಕಾರ್ಯಾಚರಣೆ ನಡೆಸಿದ ಪಂಜಾಬ್ ಪೊಲೀಸರು ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.

ಎಸ್‌ಬಿಎಸ್ ನಗರದ ಟಿಬ್ಬಾ ನಂಗಲ್-ಕುಲಾರ್ ರಸ್ತೆಯ ಬಳಿಯ ಅರಣ್ಯ ಪ್ರದೇಶದಲ್ಲಿ ಪಂಜಾಬ್ ಪೊಲೀಸರು ಮತ್ತು ಕೇಂದ್ರ ತನಿಖಾ ದಳದ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಎರಡು ರಾಕೆಟ್ ಚಾಲಿತ ಗ್ರೆನೇಡ್ (ಆರ್‌ಪಿಜಿ), ಎರಡು ಸುಧಾರಿತ ಸ್ಫೋಟಕ ಸಾಧನಗಳು (ಐಇಡಿ), ಐದು ಪಿ-86 ಹ್ಯಾಂಡ್ ಗ್ರೆನೇಡ್‌ಗಳು, ಒಂದು ಮೊಬೈಲ್ ಅನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಸೇರಿದಂತೆ ಭಯೋತ್ಪಾದಕ ಸಂಘಟನೆಗಳು ಪಂಜಾಬ್‌ನಲ್ಲಿ ಸೀಪರ್ ಸೆಲ್‌ಗಳನ್ನು ಪುನರುಜ್ಜಿವನಗೊಳಿಸಲು ಪ್ರಯತ್ನಿಸುತ್ತಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪಂಜಾಬ್ ಡಿಜಿಪಿ ಹೇಳಿದ್ದಾರೆ.

Scroll to Top