(ನ್ಯೂಸ್ ಕಡಬ) newskadaba.com, ಮೇ.09: ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.
ಹಲವು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣದ ಸಲಹೆಗಳನ್ನು ನೀಡಿದ್ದು, ಅದಕ್ಕೆ ಅನುಗುಣವಾಗಿ ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಯನ್ನು ಮಾಡಿಕೊಳ್ಳುವಂತೆ ತಿಳಿಸಿವೆ. ದೇಶಾದ್ಯಂತ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಬಿಗಿ ಕಟ್ಟೆಚ್ಚರ ವಹಿಸಲಾಗಿದೆ.
ದೇಶದ ರಾಜಧಾನಿ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಭದ್ರತೆ ಹೆಚ್ಚಿಸಿರುವ ಕಾರಣ ಕೆಲವು ವಿಮಾನಗಳ ಹಾರಾಟಗಳು ರದ್ದಾಗಿವೆ. ಪ್ರಯಾಣಿಕರು ತಮ್ಮ ವಿಮಾನಯಾನದ ಬಗ್ಗೆ ಮಾಹಿತಿ ತಿಳಿದುಕೊಂಡು ಏರ್‌ಪೋರ್ಟ್‌ಗೆ ಬರಲು ಸೂಚಿಸಲಾಗಿದೆ.