ಗಣಿಗಾರಿಕೆ ಹಗರಣ: ಶಿಕ್ಷೆಗೊಳಗಾದ ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹ

(ನ್ಯೂಸ್ ಕಡಬ) newskadaba.com, ಮೇ.09: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಗಣಿ ದೊರೆ ಮತ್ತು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಮೇ 8 ರಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರು ಅನರ್ಹತೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್, ಏಳು ವರ್ಷಗಳ ಶಿಕ್ಷೆ ನೀಡಿ ತೀರ್ಪು ನೀಡಿತ್ತು. ಇದರಿಂದ ಶಾಸಕ ಸ್ಥಾನ ಉಳಿಸಿಕೊಳ್ಳಲು ಶಿಕ್ಷೆ ಕಡಿಮೆ ಮಾಡಿ ಎಂದು ರೆಡ್ಡಿ ಕೋರ್ಟ್​ ಮುಂದೆ ಮನವಿ ಮಾಡಿದ್ದರು. ಆದರೆ ಕೋರ್ಟ್​ ರೆಡ್ಡಿ ಮನವಿಯನ್ನು ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

Also Read  ಶಿರಾಡಿ ಘಾಟ್ ಮೇಲ್ದರ್ಜೆಗೇರಿಸಲು ಕೆಂದ್ರದಿಂದ ಗ್ರೀನ್ ಸಿಗ್ನಲ್..! ➤ 2 ವರ್ಷಗಳಲ್ಲಿ ಕಾಮಗಾರಿ ಪೂರ್ಣ??

ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಮುಂದಿನ 6 ವರ್ಷಗಳ ಕಾಲ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಆದೇಶ ಹೊರಡಿಸಿದೆ. ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

error: Content is protected !!
Scroll to Top