(ನ್ಯೂಸ್ ಕಡಬ) newskadaba.com, ಮೇ.09: ಸೇನೆ ದಾಳಿ ಮಾಡುವ ಮುನ್ಸೂಚನೆ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ವಾಯು ಸೇನೆಯ ಸೂಚನೆಯಂತೆ ಚಂಢೀಗಡದಲ್ಲಿ ಸೈರನ್ ಮೊಳಗಿಸಲಾಗಿದೆ. ಜನರು ರಸ್ತೆಗಳಲ್ಲಿ ಓಡಾಡದಂತೆ, ಬಾಲ್ಕನಿಗಳಲ್ಲೂ ಕಾಣಿಸಿಕೊಳ್ಳದಂತೆ ಸೂಚನೆ ನೀಡಲಾಗಿದೆ.

ಗುರುವಾರ ರಾತ್ರಿ ಪಂಜಾಬ್, ಚಂಡೀಗಢದ ಹಲವು ಪ್ರದೇಶಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋನ್, ಕ್ಷಿಪಣಿ ದಾಳಿ ನಡೆಸಿತ್ತು. ಈ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಭಾರತೀಯ ಸೇನೆ ಪಾಕಿಸ್ತಾನದ ಕ್ಷಿಪಣಿ, ಡ್ರೋನ್ಗಳನ್ನು ಹೊಡೆದುರುಳಿಸಿತ್ತು.