‘ಸೇನಾ ಕಾರ್ಯಾಚರಣೆಯ ನೇರ ಪ್ರಸಾರ ಬೇಡ’ – ರಕ್ಷಣಾ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com, ಮೇ.09: ಭಾರತ ಮತ್ತು ಪಾಕಿಸ್ತಾನ ಸೇನಾ ಪಡೆಗಳ ನಡುವೆ ದಾಳಿ, ಪ್ರತಿ ದಾಳಿ ಹೆಚ್ಚಾಗಿದೆ. ಈ ಬಗ್ಗೆ  ಚಾನೆಲ್‌ಗಳಲ್ಲಿ ನಿರಂತರ ನೇರ ಪ್ರಸಾರ ಮಾಡಲಾಗುತ್ತಿದೆ. ಇದನ್ನು ನಿಲ್ಲಿಸುವಂತೆ ರಕ್ಷಣಾ ಸಚಿವಾಲಯ ಸೂಚನೆ ನೀಡಿದೆ.

ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸಂದೇಶ ಕಳುಹಿಸಿರುವ ರಕ್ಷಣಾ ಇಲಾಖೆ,  ನೇರ ಪ್ರಸಾರದ ಸುದ್ದಿಯಿಂದ ಭಾರತೀಯ ಸೇನೆಯ ಸಿಬ್ಬಂದಿಯ ಜೀವಕ್ಕೆ ಅಪಾಯ ಎದುರಾಗಬಹುದಾದ ಸಾಧ್ಯತೆ ಇರುತ್ತದೆ ಎಂದು ಸೂಚನೆ ನೀಡಲಾಗಿದೆ.

ಎಲ್ಲಾ ಮಾಧ್ಯಮ ವಾಹಿನಿಗಳು, ಡಿಜಿಟಲ್ ವೇದಿಕೆಗಳು ಮತ್ತು ಇತರರು ರಕ್ಷಣಾ ಕಾರ್ಯಾಚರಣೆಗಳು ಮತ್ತು ಭದ್ರತಾ ಪಡೆಗಳ ಚಲನವಲನಗಳ ನೇರ ಪ್ರಸಾರ ಅಥವಾ ರಿಯಲ್ ಟೈಮ್ ರಿಪೋರ್ಟ್ ಮಾಡುವುದನ್ನು ನಿಲ್ಲಿಸುವಂತೆ ಸೂಚಿಸಲಾಗಿದೆ. ಅಂತಹ ಸೂಕ್ಷ್ಮ ಮಾಹಿತಿಯನ್ನು ಬಹಿರಂಗಪಡಿಸುವುದು ಕಾರ್ಯಾಚರಣೆಯ ಪರಿಣಾಮಕಾರಿತ್ವಕ್ಕೆ ಅಪಾಯ ಉಂಟುಮಾಡಬಹುದು ಮತ್ತು ಸೇನಾ ಸಿಬ್ಬಂದಿ ಜೀವಗಳಿಗೆ ಅಪಾಯ ಆಗಬಹುದು  ಎಂದು ರಕ್ಷಣಾ ಇಲಾಖೆ ಹೇಳಿದೆ.

error: Content is protected !!
Scroll to Top