(ನ್ಯೂಸ್ ಕಡಬ) newskadaba.com, ಮೇ.09:ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಭುಗಿಲೆದ್ದಿದ್ದು, ಇದರ ನಡುವೆ ಭಾರತ ಗಡಿ ಪ್ರವೇಶಕ್ಕೆ ಯತ್ನಿಸಿದ ಪಾಕಿಸ್ತಾನ ಮೂಲದ 7 ಉಗ್ರರನ್ನು ಗಡಿ ಭದ್ರತಾ ಪಡೆ (BSF) ಹೊಡೆದುರುಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದ್ದು, ಅಂತರರಾಷ್ಟ್ರೀಯ ಗಡಿಯಲ್ಲಿ ಭಯೋತ್ಪಾದಕರ ಬಹುದೊಡ್ಡ ಒಳನುಸುಳುವಿಕೆ ಯತ್ನವನ್ನು ಬಿಎಸ್‌ಎಫ್ ವಿಫಲಗೊಳಿಸಿದೆ.
ಮೂಲಗಳ ಪ್ರಕಾರ ಮೇ 8ರ ರಾತ್ರಿ 11 ಗಂಟೆ ಸುಮಾರಿಗೆ ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪ್ರಮುಖ ಒಳನುಸುಳುವಿಕೆ ಯತ್ನವನ್ನು ಬಿಎಸ್‌ಎಫ್ ವಿಫಲಗೊಳಿಸಿದೆ ಎಂದು ಗಡಿ ಭದ್ರತಾ ಪಡೆ ಮಾಹಿತಿ ನೀಡಿದೆ.