ನೆಲ್ಯಾಡಿ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.09. ಚಾಕುವಿನಿಂದ ಇರಿದು ಯುವಕನೋರ್ವನನ್ನು ಕೊಂದ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರ ಠಾಣಾ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ.

ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ. ಮನೆಯ ಅಂಗಳದಲ್ಲಿ ಶರತ್ ನನ್ನು ಚಾಕುವಿನಿಂದ ಇರಿದು ಕೊಲೆಗೈಯಲಾಗಿದ್ದು, ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಶೀಘ್ರದಲ್ಲಿ ಕನ್ನಡ ಕಸ್ತೂರಿ ತಂತ್ರಾಂಶ ಲೋಕಾರ್ಪಣೆ: ಡಾ| ಬಿಳಿಮಲೆ

error: Content is protected !!
Scroll to Top