ಭಾರತ-ಪಾಕ್ ಉದ್ವಿಗ್ನತೆ: ಬಂದ್ ಆಗಿದ್ದ 32 ಏರ್‌ಪೋರ್ಟ್‌ಗಳು ಮತ್ತೆ ಕಾರ್ಯಾರಂಭಿಸಿಲು ಸೂಚನೆ

(ನ್ಯೂಸ್ ಕಡಬ) newskadaba.com , ಮೇ.10. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನೆಲೆ ಬಂದ್ ಆಗಿದ್ದ ವಿವಿಧ ರಾಜ್ಯಗಳ 32 ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭ ಮಾಡಲು ವಾಯುಪಡೆ ಸೂಚನೆ ನೀಡಿರುವುದಾಗಿ ವರದಿಯಾಗಿದೆ.

32 ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಭಾರತೀಯ ವಾಯುಪಡೆ ಅಧಿಕಾರಿಗಳು ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಸಂಬಂಧಪಟ್ಟ ವಿಮಾನ ನಿಲ್ದಾಣಗಳಿಗೆ ಸೂಚನೆ ನೀಡಿದೆ. ಹೀಗಾಗಿ ದೇಶದ ಪಶ್ಚಿಮ ಮತ್ತು ಉತ್ತರ ಭಾಗಗಳಲ್ಲಿ ತಾತ್ಕಾಲಿಕವಾಗಿ ಮುಚ್ಚಲಾಗಿದ್ದ ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭಿಸಲಿದೆ.

ಇತ್ತೀಚೆಗೆ ಭಾರತ ಪಾಕ್ ನಡುವಿನ ಸಂಘರ್ಷ ತೀವ್ರಗೊಂಡಿತ್ತು. ಈ ಹಿನ್ನೆಲೆ ಸುರಕ್ಷತಾ ಕ್ರಮವಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು 32 ಏರ್‌ಪೋರ್ಟ್‌ಗಳನ್ನು ಮೇ 15ರ ವರೆಗೆ ತಾತ್ಕಾಲಿಕವಾಗಿ ಬಂದ್ ಮಾಡುವಂತೆ ಸೂಚನೆ ನೀಡಿತ್ತು.

error: Content is protected !!
Scroll to Top