ಮಹಿಳೆಗೆ ಮರ್ಮಾಂಗ ತೋರಿಸಿದ ಗ್ರಾಪಂ ಉಪಾಧ್ಯಕ್ಷ: ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ

(ನ್ಯೂಸ್ ಕಡಬ) newskadaba.com , ಮೇ.12.  ಮಂಗಳೂರು: ಗ್ರಾಮ ಪಂಚಾಯತಿ ಉಪಾಧ್ಯಕ್ಷ ಹಾಗೂ ಬಿಜೆಪಿ ಸದಸ್ಯನೊಬ್ಬ ರಸ್ತೆಯ ವಿವಾದಕ್ಕೆ ವಾಗ್ಯುದ್ಧ ಆರಂಭಿಸಿ ಮಹಿಳೆಯ ಜೊತೆ ಅಸಭ್ಯ ವರ್ತನೆ ತೋರಿದ್ದಾನೆ. ಈತನ ವಿರುದ್ಧ ಮಹಿಳೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸರಿಗೆ ದೂರು ನೀಡಿದ್ದಾರೆ. ಆತನನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಇಡ್ಕಿದು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಕೊಡೆಂಚರಪಾಲು ಎಂಬಾತ ಪ್ರಕರಣದ ಆರೋಪಿ.

ಮನೆಗೆ ಹೋಗುವ ರಸ್ತೆಗೆ ಸಂಬಂಧಿಸಿದಂತೆ ಮಹಿಳೆಗೂ ಪದ್ಮನಾಭ ಅವರಿಗೂ ವಿವಾದ ಇತ್ತು. ರಸ್ತೆಯ ಗೇಟಿಗೆ ಬೀಗ ಹಾಕಿದ್ದನ್ನು ವಿಚಾರಿಸಲು ಬಂದ ಮಹಿಳೆಯ ಮುಂದೆ ಈತ ಚಡ್ಡಿ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದಾನೆ. ಈ ಬಗ್ಗೆ ವೀಡಿಯೋ ವೈರಲ್ ಆಗಿದೆ. ಮಹಿಳೆ ಪದ್ಮನಾಭ ಸಪಲ್ಯ ಅವರ ವಿರುದ್ಧ ವಿಟ್ಲ ಪೊಲೀಸರಿಗೆ ದೂರು ನೀಡಿದರು. ಘಟನೆಯ ಮಾಹಿತಿ ಪಡೆದ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ತಕ್ಷಣದಿಂದ ಜಾರಿಗೆ ಬರುವಂತೆ ಪದ್ಮನಾಭ ಸಪಲ್ಯ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಲ್ಲದೇ ಕೂಡಲೇ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ.

error: Content is protected !!
Scroll to Top