ಪಾಕ್‍ಗೆ ನಾವು ಹೇಗಾದ್ರೂ ಪ್ರತಿಕ್ರಿಯಿಸುತ್ತೇವೆ, ಇದನ್ನು ಟ್ರಂಪ್ ಅರ್ಥ ಮಾಡಿಕೊಳ್ಳಲಿ: ಮೋದಿ

(ನ್ಯೂಸ್ ಕಡಬ) newskadaba.com , ಮೇ.12.  ಪಾಕಿಸ್ತಾನದ ದಾಳಿಗೆ ಭಾರತ ಏನು ಬೇಕಾದರೂ, ಹೇಗೆ ಬೇಕಾದರೂ ಪ್ರತಿಕ್ರಿಯಿಸುತ್ತೇವೆ. ಇದನ್ನು ಟ್ರಂಪ್ ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.

ಭಾರತ ಹಾಗೂ ಪಾಕ್ ನಡುವಿನ ಉದ್ವಿಗ್ನತೆ ಹೆಚ್ಚಾದ ಬಗ್ಗೆ ಗುಪ್ತಚರ ಮಾಹಿತಿ ಪಡೆದಿದ್ದ ವ್ಯಾನ್ಸ್, ಮೇ 9ರಂದು ಮೋದಿಯವರನ್ನು ಸಂಪರ್ಕಿಸಿ ಸಂಯಮದಿಂದ ವರ್ತಿಸುವಂತೆ ಮನವಿ ಮಾಡಿದ್ದರು. ಈ ಬಗ್ಗೆ ಅಮೆರಿಕದ ಪತ್ರಿಕೆಗಳಲ್ಲಿ ವರದಿಯಾಗಿತ್ತು. ಈ ವೇಳೆ ಮೋದಿಯವರು ಪಾಕಿಸ್ತಾನದ ವಿರುದ್ಧ ಖಾರವಾಗಿ ಪ್ರತಿಕ್ರಿಯಿಸಿದ್ದರು ಎನ್ನಲಾಗಿದೆ.

error: Content is protected !!
Scroll to Top