(ನ್ಯೂಸ್ ಕಡಬ) newskadaba.com , ಮೇ.13. ನೆಲಮಂಗಲ ಮೇ 13- ಆಯಿಲ್ ಗೋದಾಮುವೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 30 ಕೋಟಿಗೂ ಹೆಚ್ಚು ಮೌಲ್ಯದ ಆಯಿಲ್ ಬೆಂಕಿಗೆ ಹೊತ್ತಿ ಉರಿದಿದೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಡಕಮಾರನಹಳ್ಳಿ ಬಳಿ ಇರುವ ಶೆಲ್ ಕಂಪನಿಗೆ ಸೇರಿದ ಆಯಿಲ್ ಗೋದಾಮಿನಲ್ಲಿ ಇಂದು ಮುಂಜಾನೆ 3 ಗಂಟೆ ಸುಮಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಗೋದಾಮು ಪೂರ್ತಿ ಬೆಂಕಿ ಆವರಿಸಿಕೊಂಡು ಧಗಧಗನೆ ಹೊತ್ತಿ ಉರಿಯಲಾರಂಭಿಸಿದೆ.

ಸುದ್ದಿ ತಿಳಿಯುತ್ತಿದ್ದಂತೆ ನೆಲಮಂಗಲ, ಪೀಣ್ಯ ಮತ್ತು ಯಶವಂತಪುರ ಭಾಗದ 12ಕ್ಕೂ ಹೆಚ್ಚು ಅಗ್ನಿ ಶಾಮಕ ವಾಹನಗಳೊಂದಿಗೆ ಅಧಿಕಾರಿಗಳೂ ಸೇರಿದಂತೆ 80 ಮಂದಿ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ ಸತತವಾಗಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾಗ ಕ್ಷಣಕ್ಷಣಕ್ಕೂ ಬೆಂಕಿಯ ಜ್ವಾಲೆ ಹೆಚ್ಚಾಗುತ್ತಿದ್ದದ್ದು ಕಂಡು ಬಂದಿತು.