ಶೋಪಿಯಾನ್‌ನಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ- ಮೂವರು ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com , ಮೇ.13. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತನಾಗಿದ್ದಾರೆ.

ಎನೌಕೌಂಟರ್‌ನಲ್ಲಿ ಉನ್ನತ ಭಯೋತ್ಪಾದಕ ಕಮಾಂಡರ್ ಸೇರಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ. ಪ್ರಸ್ತುತ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ (ಸಿಎಎಸ್‌ಒ) ನಡೆಯುತ್ತಿರುವ ಸ್ಥಳದಲ್ಲಿ ಭಯೋತ್ಪಾದಕರು ಸಿಕ್ಕಿಬಿದ್ದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿಖರ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಅಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆ ಪ್ರಾರಂಭಿಸಿದವು. ಈ ವೇಳೆ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದರು. ಉಗ್ರರ ದಾಳಿಗೆ ಪ್ರತಿಯಾಗಿ ಭದ್ರತಾ ಪಡೆಗಳು ದಾಳಿ ನಡೆಸಿದ್ದು, ಪರಸ್ಪರರ ಗುಂಡಿನ ಚಕಮಕಿ ನಡೆದಿದೆ.

error: Content is protected !!
Scroll to Top