(ನ್ಯೂಸ್ ಕಡಬ) newskadaba.com , ಮೇ.14. ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದರು. ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ. ಆದರೂ ಚೂರು, ಪಾರು ಶೇಕಡ ಕೇಂದ್ರದ ಹಣವೂ ಬರುತ್ತಿಲ್ಲ. ಈ ನಿರಂತರ ಅನ್ಯಾಯ ಪ್ರಶ್ನಿಸಬೇಕಲ್ಲವಾ ಎಂದರು.