(ನ್ಯೂಸ್ ಕಡಬ) newskadaba.com , ಮೇ.15. ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.
ದಕ್ಷಿಣ ಕಾಶ್ಮೀರದ ಅವಂತಿಪೋರಾದ ನಾಡರ್ ಟ್ರಾಲ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆಗಿಳಿದಿದ್ದವು. ಉಗ್ರರು ಅಡಗಿ ಕುಳಿತಿರುವ ಸ್ಥಳದತ್ತ ಭದ್ರತಾ ಪಡೆಗಳು ತಲುಪುತ್ತಿದ್ದಂತೆಯೇ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಈ ವೇಳೆ ಭದ್ರತಾ ಪಡೆ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಮಾರ್ಪಡಿಸಿದ್ದು, ಸ್ಥಳವನ್ನು ಸುತ್ತುವರೆದು ಉಗ್ರರಿಗೆ ದಿಟ್ಟ ಉತ್ತರ ನೀಡಿದ್ದಾರೆ.
ಇದರಂತೆ ಮೂವರು ಉಗ್ರನನ್ನು ಹತ್ಯೆ ಮಾಡಿದ್ದು, ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಲಭ್ಯವಾಗಿರುವ ಮಾಹಿತಿಯಂತೆ ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.