ಮಂಗಳೂರು : ಸರ್ವೆ ಮೇಲ್ವಿಚಾರಕರ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

(ನ್ಯೂಸ್ ಕಡಬ) newskadaba.com , ಮೇ.15. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳಗಿನ ಜಾವ ನಗರದಲ್ಲಿರುವ ಸರ್ವೇ ಮೇಲ್ವಿಚಾರಕ ಮಂಜುನಾಥ್ ಅವರ ನಿವಾಸ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ.

ಬಿಜೈಯಲ್ಲಿರುವ ಮಂಜುನಾಥ್ ಅವರ ನಿವಾಸವನ್ನು ಗುರಿಯಾಗಿಸಿಕೊಂಡು ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ತನಿಖೆಯ ಭಾಗವಾಗಿ ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ.

ತುಮಕೂರು ಮೂಲದ ಮಂಜುನಾಥ್ ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಮತ್ತು ಅವರ ಕುಟುಂಬ ಮೂರು ಅಂತಸ್ತಿನ ಮನೆಯಲ್ಲಿ ವಾಸಿಸುತ್ತಿದ್ದಾರೆ. ಗುರುವಾರ, ಲೋಕಾಯುಕ್ತ ಅಧಿಕಾರಿಗಳು ಮೂರು ವಾಹನಗಳಲ್ಲಿ ಆಗಮಿಸಿ ಮಂಜುನಾಥ್ ಅವರ ಆಸ್ತಿ ಮತ್ತು ಹಣಕಾಸಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲು ಪ್ರಾರಂಭಿಸಿದರು ಎನ್ನಲಾಗಿದೆ.

error: Content is protected !!
Scroll to Top