(ನ್ಯೂಸ್ ಕಡಬ) newskadaba.com , ಮೇ.15. ಪಾಕಿಸ್ತಾನಕ್ಕೆ ಬೆಂಬಲಿಸಿದ ಟರ್ಕಿಗೆ ಭಾರತೀಯ ಚಿತ್ರರಂಗ ಬಿಸಿ ಮುಟ್ಟಿಸಲು ಮುಂದಾಗಿದೆ. ಟರ್ಕಿ ಮತ್ತು ಅಜರ್‌ಬೈಜಾನ್ ಕುತಂತ್ರದ ಬೆನ್ನಲ್ಲೇ ಸಿನಿಮಾ ರಂಗ ಮಹತ್ವದ ನಿರ್ಧಾರ ಕೈಗೊಂಡಿದೆ. ಪಾಕಿಸ್ತಾನ ಪರ ನಿಲುವು ಹೊಂದಿರುವ ಟರ್ಕಿಯೆಯನ್ನು ಶೂಟಿಂಗ್ ತಾಣವಾಗಿ ಬಹಿಷ್ಕರಿಸುವಂತೆ ಪಶ್ಚಿಮ ಭಾರತ ಸಿನಿಮಾ ನೌಕರರ ಒಕ್ಕೂಟ (FWICE) ಬುಧವಾರ ಭಾರತೀಯ ಕಲಾವಿದರು ಮತ್ತು ನಿರ್ಮಾಪಕರಿಗೆ ಮನವಿ ಮಾಡಿದೆ.

ಟರ್ಕಿ ಮತ್ತು ಅಜರ್‌ಬೈಜಾನ್‌ನಲ್ಲಿ ಯಾವುದೇ ಸಿನಿಮಾದ ಶೂಟಿಂಗ್ ಮಾಡದಿರಲು ‘ಫೆಡರೇಷನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯಿಸ್’ ಕಡೆಯಿಂದ ಭಾರತೀಯ ಚಿತ್ರರಂಗ ನಿರ್ಮಾಪಕರಿಗೆ ಪತ್ರದ ಮೂಲಕ ತಿಳಿಸಲಾಗಿದೆ.