(ನ್ಯೂಸ್ ಕಡಬ) newskadaba.com ವಿಟ್ಲ, ಎ.02. ಬೈಕೊಂದು ಸ್ಕಿಡ್ ಆಗಿ ಮಗುಚಿ ಬಿದ್ದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.
ಘಟನೆಯಲ್ಲಿ ಬೈಕ್ ಸವಾರ ಪೆರ್ನೆ ನಿವಾಸಿ ಲಾರೆನ್ಸ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣವೇ ಲಾರೆನ್ಸ್ ರನ್ನು ರಿಕ್ಷಾ ಮೂಲಕ ಮಾಣಿಗೆ ಕರೆದುಕೊಂಡು ಹೋಗಿ ಬಳಿಕ ಮಾಣಿಯ 108 ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.