ಕಾಶ್ಮೀರದಲ್ಲಿ 48 ಗಂಟೆಗಳಲ್ಲಿ ಆರು ಪ್ರಮುಖ ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com , ಮೇ.16. ಬೆಂಗಳೂರು: ಕಳೆದ 48 ಗಂಟೆಗಳಲ್ಲಿ ಕಾಶ್ಮೀರದಲ್ಲಿ ಆರು ಮಂದಿ ಪ್ರಮುಖ ಉಗ್ರರ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಳು ಮಾಹಿತಿ ನೀಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಒಸಿ ವಿಕ್ಟರ್ ಫೋರ್ಸ್ ಮೇಜರ್ ಜನರಲ್ ಧನಂಜಯ್ ಜೋಶಿ ಅವರು, ‘ದಕ್ಷಿಣ ಕಾಶ್ಮೀರದಲ್ಲಿ ಎರಡು ಪ್ರಮುಖ ಕಾರ್ಯಾಚರಣೆಗಳನ್ನು ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಆರು ಮಂದಿ ಪ್ರಮುಖ ಉಗ್ರರನ್ನು ಹೊಡೆದುರುಳಿಸಲಾಗಿದೆ’ ಎಂದರು.

‘ಸಿಆರ್‌ಪಿಎಫ್, ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಆಪರೇಷನ್ ಕೆಲ್ಲಾರ್ (ಶೋಪಿಯಾನ್) ಮತ್ತು ಆಪರೇಷನ್ ತ್ರಾಲ್ (ಪುಲ್ವಾಮಾ)ದಲ್ಲಿ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಆರು ಉಗ್ರರ ಹತ್ಯೆ ಮಾಡಲಾಗಿದೆ. ಇದು ಭದ್ರತಾ ಪಡೆಗಳ ನಡುವಿನ ನಿಕಟ ಸಮನ್ವಯದಿಂದ ಸಾಧ್ಯವಾಗಿದೆ’ ಎಂದು ತಿಳಿಸಿದರು.

error: Content is protected !!
Scroll to Top