(ನ್ಯೂಸ್ ಕಡಬ) newskadaba.com , ಮೇ.16. ಶ್ರೀನಗರ: ಐಎಂಎಫ್ ನೀಡಿರುವ ಸಾಲವನ್ನು ಪಾಕಿಸ್ತಾನ ಪರೋಕ್ಷವಾಗಿ ಉಗ್ರರ ಕುಟುಂಬಗಳಿಗೆ ಹಾಗೂ ಭಯೋತ್ಪಾದನೆಗೆ ಆರ್ಥಿಕ ನೆರವು ನೀಡುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆರೋಪಿಸಿದರು.

ಇಂದು ಗುಜರಾತ್‌ನ ಭುಜ್ ವಾಯುನೆಲೆಗೆ ಭೇಟಿ ನೀಡಿ ಭಾರತೀಯ ವಾಯುಪಡೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಿಕ್ಷೆ ಬೇಡುತ್ತಿದ್ದ ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯು ವಿಸ್ತೃತ ನಿಧಿ ಸೌಲಭ್ಯದಡಿಯಲ್ಲಿ ಎರಡು ಕಂತುಗಳಲ್ಲಿ 2.1 ಬಿಲಿಯನ್ ಡಾಲರ್‌ಗಳನ್ನು ವಿತರಿಸಿದೆ. ಇದನ್ನು ಪಾಕಿಸ್ತಾನ ಪರೋಕ್ಷವಾಗಿ ಭಯೋತ್ಪಾದನೆಗೆ ನೀಡುತ್ತಿದೆ. ಈ ಮೂಲಕ ಪಾಕಿಸ್ತಾನ ಸರ್ಕಾರ ಭಾರತೀಯರ ವಿರುದ್ಧ ದಾಳಿ ನಡೆಸಲು ಅವಕಾಶ ನೀಡುತ್ತಿದೆ. ಹೀಗಾಗಿ ನೀಡಿರುವ ಸಾಲವನ್ನು ಐಎಂಎಫ್ ಮರುಪರಿಶೀಲಿಸಬೇಕೆಂದು ಕೇಳಿಕೊಂಡರು.