ಇಂದಿನ ಹವಾಮಾನ ವರದಿ

(ನ್ಯೂಸ್ ಕಡಬ) newskadaba.com , ಮೇ.17: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಶುರುವಾಗಿದ್ದು, ಇಂದು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳೂರು, ಬೆಳಗಾವಿ, ಶಿವಮೊಗ್ಗ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇನ್ನುಳಿದಂತೆ ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಚಾಮರಾಜನಗರ ಸೇರಿ ಹಲವು ಜಿಲ್ಲೆಗಳಲ್ಲಿ ಬಿಸಿಲು ಮಳೆ ಆಟ ಮುಂದುವರಿಯಲಿದೆ. ಬೆಳಗ್ಗೆ ಮತ್ತು ಸಂಜೆ ಮಳೆಯಾಗಲಿದ್ದು, ಮಧ್ಯಾಹ್ನ ಬಿಸಿಲು ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

Scroll to Top