‘ಆಪರೇಷನ್ ಸಿಂಧೂರ’ ಬಗ್ಗೆ ಪಾಕ್ ಸೇನೆ, ಐಎಸ್‌ಐಗೆ ಮಾಹಿತಿ ನೀಡುತ್ತಿದ್ದ ಯುವಕ ಅರೆಸ್ಟ್

crime, arrest, suspected

(ನ್ಯೂಸ್ ಕಡಬ) newskadaba.com , ಮೇ.17: ಭಾರತ ಸೇನೆಯ ಆಪರೇಷನ್ ಸಿಂಧೂರದ ಬಗ್ಗೆ ಪಾಕಿಸ್ತಾನ ಸೇನೆ ಮತ್ತು ಐಎಸ್‌ಐಗೆ ಮಾಹಿತಿ ನೀಡುತ್ತಿದ್ದ ಆರೋಪದ ಮೇಲೆ ಹರಿಯಾಣದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಮಸ್ತ್‌ಗಢ ಚೀಕಾ ಗ್ರಾಮದ ದೇವೇಂದ್ರ ಸಿಂಗ್ (25) ಬಂಧಿತ ಯುವಕ. ವಿಚಾರಣೆಯ ಸಂದರ್ಭದಲ್ಲಿ ದೇವೇಂದ್ರ ಸಿಂಗ್ ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್‌ಐ ಜೊತೆ ಸಂಪರ್ಕದಲ್ಲಿರುವುದಾಗಿ ಬಹಿರಂಗಪಡಿಸಿದ್ದಾನೆ. ದೇವೇಂದ್ರ ಸಿಂಗ್ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಗ್ಗೆಯೂ ಐಎಸ್‌ಐಗೆ ಆಗಾಗ ಮಾಹಿತಿ ರವಾನಿಸಿದ್ದಾನೆ. ಗುಪ್ತಚರ ಮಾಹಿತಿ ಆಧಾರದ ಮೇಲೆ ಕೈಥಲ್ ಜಿಲ್ಲಾ ಪೊಲೀಸರು ದೇವೇಂದ್ರ ಸಿಂಗ್‌ನನ್ನು ಬಂಧಿಸಿದ್ದಾರೆ. ಸೈಬರ್ ಪೊಲೀಸ್ ಠಾಣೆಯಲ್ಲಿ ದೇವೆಂದ್ರ ಸಿಂಗ್ ಬಳಿ ಪತ್ತೆಯಾದ ಸಾಧನಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ. ತನಿಖೆ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಎಸ್‌ಪಿ ಕೈಥಲ್ ವೀರಭನ್ ಮಾಹಿತಿ ನೀಡಿದ್ದಾರೆ.

error: Content is protected !!
Scroll to Top