ನಟ ಶ್ರೀಧರ್ ನಾಯಕ್ ನಿಧನ

(ನ್ಯೂಸ್ ಕಡಬ) newskadaba.com, ಮೇ.27. ಬೆಂಗಳೂರು : ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅವರು ಮೇ 26ರ ರಾತ್ರಿ ನಿಧನ ಹೊಂದಿದ್ದಾರೆ.

‘ಪಾರು’‌ ಧಾರಾವಾಹಿ, ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾದಲ್ಲಿ ನಟಿಸಿದ್ದ ಶ್ರೀಧರ್ ನಾಯಕ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿರುತೆರೆ ಹಾಗೂ ಸಿನಿಮಾ ಎರಡರಲ್ಲೂ ನಟಿಸಿದ್ದ ಶ್ರೀಧರ್ ನಾಯಕ್ ಆರ್ಥಿಕ ಪರಿಸ್ಥಿತಿ ಕೂಡ ಹದಗೆಟ್ಟಿತ್ತು. ಈ ಹಿನ್ನೆಲೆ ಸಹಾಯಕ್ಕಾಗಿ ನೆರವನ್ನು ಕೋರಿದ್ದರು. ಕಿರುತೆರೆ ತಾರೆಯರು ಹಾಗೂ ಜನರು ಇವರ ಪರಿಸ್ಥಿತಿಯನ್ನು ನೋಡಿ ನೆರವನ್ನು ನೀಡಿದ್ದರು.

ಬೆಂಗಳೂರಿನ ಬ್ಯಾಪಿಸ್ಟ್ ಆಸ್ಪತ್ರೆಯಲ್ಲಿ ಶ್ರೀಧರ್ ನಾಯಕ್ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಗುರುತು ಸಿಗದಷ್ಟು ನಿತ್ರಾಣರಾಗಿದ್ದ ಶ್ರೀಧರ್ ಕಳೆದ ಹಲವು ದಿನಗಳಿಂದ ಬ್ಯಾಪಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ನಟ ಶ್ರೀಧರ್ ನಿನ್ನೆ ಕೊನೆಯುಸಿರೆಳೆದಿದ್ದಾರೆ.

Scroll to Top