ಕೊಡಗಿನಲ್ಲಿ ಗಾಳಿ-ಮಳೆ: ಮರ ಬಿದ್ದು ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com, ಮೇ.27. ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು ಮರ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಅಮತ್ತಿ ಹೋಬಳಿ ಬಾಡಗ ಬಾಣಂಗಾಲ ಗ್ರಾಮದ ಜನತಾ ಕಾಲನಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಸ್ಥಳೀಯ ನಿವಾಸಿ ಪಿಸಿವಿಷ್ಟು ಬೆಳ್ಳಿಯಪ್ಪ (65) ಮೃತಪಟ್ಟವರು. ಇಂದು ಬೆಳಗ್ಗೆ 730ರ ಸುಮಾರಿಗೆ ವಿಷ್ಣು ಬೆಳ್ಳಿಯಪ್ಪರ ಮೇಲೆ ಮಾವಿನಮರ ಉರುಳಿಬಿದ್ದಿದೆ. ತಕ್ಷಣ ಇವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಗ್ರೇಡ್ 2 ತಹಶೀಲ್ದಾರರು ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

error: Content is protected !!
Scroll to Top