ವೃದ್ಧರು, ಕಾಯಿಲೆಯಿರುವವರಿಗೆ ಮಾಸ್ಕ್ ಕಡ್ಡಾಯ: ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com, ಮೇ.27. ಬೆಂಗಳೂರು: ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಪೂರ್ವ ದ್ವಾರದ ಬಳಿ ಇರುವ ಮಾಜಿ ಪ್ರಧಾನಮಂತ್ರಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ನೆಹರೂ ಅವರ ಪುಣ್ಯ ತಿಥಿಯನ್ನು ಸರ್ಕಾರ ಗೌರವ ಹಾಗೂ ಅಭಿಮಾನದಿಂದ ನೆರವೇರಿಸಿದೆ. ದೇಶದ ಬಡತನವನ್ನು ಹೋಗಲಾಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದರು. ಉದ್ಯೋಗ ಸೃಷ್ಟಿ, ಮಿಶ್ರ ಆರ್ಥಿಕತೆಯನ್ನು ದೇಶದಲ್ಲಿ ಪರಿಚಯಿಸಿದ್ದಲ್ಲದೆ ದೇಶದಲ್ಲಿ ಹಸಿರು ಕ್ರಾಂತಿಗೆ ಅಡಿಗಲ್ಲು ಹಾಕಿದರು. ಸಹಕಾರಿ ಚಳವಳಿ, ವಿಕೇಂದ್ರೀಕರಣಕ್ಕೆ ಬದ್ಧತೆಯಿಂದ ಕೆಲಸ ಮಾಡಿದರು ಎಂದು ಹೇಳಿದರು.

Also Read  ಇನ್ನೋವಾಗಳೆರಡು ಮುಖಾಮುಖಿ ಢಿಕ್ಕಿ ► ಮಹಿಳೆ ಸ್ಥಳದಲ್ಲೇ ಮೃತ್ಯು

ನೆಹರು ಅವರು ಪ್ರಧಾನಿಗಳಾಗಿದ್ದ 17 ವರ್ಷಗಳ ಅವಧಿಯಲ್ಲಿ ಅನೇಕ ಅಣೆಕಟ್ಟು, ಸಾರ್ವಜನಿಕ ವಲಯದಲ್ಲಿ ಕೈಗಾರಿಕೆ, ಶಿಕ್ಷಣ ಸಂಸ್ಥೆಗಳನ್ನೂ ಸ್ಥಾಪಿಸಿದರು. ದೇಶ ಆರ್ಥಿಕವಾಗಿ ಸಬಲತೆಯನ್ನು ಕಂಡುಕೊಂಡಿದ್ದರೆ, ಆಹಾರದಲ್ಲಿ ಸ್ವಾವಲಂಬನೆಯನ್ನು ಕಂಡುಕೊಂಡಿದ್ದರೆ ನೆಹರೂ ಅವರು ಹಾಕಿದ ಅಡಿಪಾಯ ಕಾರಣ ಎಂದರು. ನೆಹರೂ ಅವರನ್ನು ಗೌರವದಿಂದ ಸ್ಮರಿಸುವ ಕೆಲಸವನ್ನು ಪ್ರತಿಯೊಬ್ಬ ಭಾರತೀಯನೂ ಮಾಡಬೇಕು ಎಂದರು.

error: Content is protected !!
Scroll to Top