(ನ್ಯೂಸ್ ಕಡಬ) newskadaba.com, ಮೇ.27. ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನಲೆಯಲ್ಲಿ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
ಕಳೆದ ಮಾರ್ಚ್ 26ರಂದು ಪಕ್ಷ ವಿರೋಧಿ ಚಟುವಟಿಕೆ . ಹಿನ್ನಲೆಯಲ್ಲಿ ಬಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟಿಸಿದ ಬೆನ್ನಲ್ಲೇ ಕೇಂದ್ರ ಬಿಜೆಪಿ ವರಿಷ್ಠರು ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರುಗಳಿಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಗೇಟ್ ಪಾಸ್ ನೀಡಿದೆ.
ಹಲವು ಬಾರಿ ಎಚ್ಚರಿಕೆ ಕೊಟ್ಟಿದ್ದರೂ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ತಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳದ ಹಿನ್ನಲೆಯಲ್ಲಿ ಕೇಂದ್ರ ಶಿಸ್ತು ಸಮಿತಿ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಕೇಂದ್ರ ಬಿಜೆಪಿಯ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂಪಾಠಕ್ ಆದೇಶದಲ್ಲಿ ತಿಳಿಸಿದ್ದಾರೆ