ಕರಾವಳಿಯಲ್ಲಿ ಯುವಕನ ಕೊಲೆ- ಸರಕಾರದ ವೈಫಲ್ಯ ಆರೋಪ ಕಡಬ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಜೀನಾಮೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 28. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಲ್ತಮಜಲು ಎಂಬಲ್ಲಿ ಅಮಾಯಕ ಯುವಕ ಅಬ್ದುಲ್ ರಹೀಂ ಎಂಬಾತನ ಹತ್ಯೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಡಬ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸಿಯಾಬುದ್ದೀನ್ ಸುಂಕದಕಟ್ಟೆ ಅವರು ಬುಧವಾರದಂದು ತನ್ನ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ಸರಕಾರದ ಆಡಳಿತ ವ್ಯವಸ್ಥೆಯಿಂದ ತಾನು ಬೇಸೆತ್ತಿದ್ದು, ಜನರಲ್ಲಿ ಕಾನೂನಿನ ಮೇಲಿನ ನಂಬಿಕೆ ಕಡಿಮೆಯಾಗಿದೆ. ಈ ಘಟನೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಜುಗರವಾಗಿದೆ ಎಂದು ಅವರು ತಿಳಿಸಿದ್ದಾರೆ.

error: Content is protected !!
Scroll to Top