ಸೌದಿ ಅರೇಬಿಯಾದಲ್ಲಿ ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕನನ್ನು ಗುಂಡಿಕ್ಕಿ ಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕರೊಬ್ಬರನ್ನು ರವಿವಾರ ಬೆಳಗಿನ ಜಾವ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಸೌದಿ ಅರೇಬಿಯದ ಅಸೀರ್ ಪ್ರಾಂತ್ಯದ ಬಿಶಾ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು 41 ವರ್ಷದ ಬಷೀರ್ ಎಂದು ಗುರುತಿಸಲಾಗಿದೆ. ಅವರು ಟ್ಯಾಕ್ಸಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಕಳೆದ 13 ವರ್ಷಗಳಿಂದ ಬಷೀರ್ ಅವರು ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದರು. ಅವರು ಮೊದಲು ಹೌಸ್ ಡ್ರೈವರ್ ವೀಸಾದ ಮೇಲೆ ಸೌದಿಗೆ ಆಗಮಿಸಿದ್ದರು ಎನ್ನಲಾಗಿದೆ.

Scroll to Top