ರಾಜ್ಯಾದ್ಯಾಂತ ಜೂನ್ 8ರವರೆಗೆ ಸಾಧಾರಣ ಮಳೆ

(ನ್ಯೂಸ್ ಕಡಬ) newskadaba.com ಕಡಬ, ಜೂ.02: ಕರ್ನಾಟಕದಾದ್ಯಂತ ಜೂನ್ 8ರವರೆಗೂ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಎರಡು ವಾರದಿಂದ ಕರ್ನಾಟಕದಾದ್ಯಂತ ಎಡಬಿಡದೆ ಸುರಿದ ಭಾರೀ ಮಳೆಯಿಂದಾಗಿ ನಾನಾ ಅವಾಂತರ ಸೃಷ್ಟಿಯಾಗಿ, ಜನಜೀವನ ಅಸ್ತವ್ಯಸ್ತಗೊಂಡಿತ್ತು. ಆದರೆ ಮಳೆ ಇದೀಗ ಕೊಂಚ ಬಿಡುವು ಪಡೆದಿದ್ದು, ಜೂನ್ 8ರವರೆಗೆ ಸಾಧಾರಣ ಮಳೆಯಾಗಲಿದೆ. ಇನ್ನು ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

error: Content is protected !!
Scroll to Top