(ನ್ಯೂಸ್ ಕಡಬ) newskadaba.com ಕಡಬ, ಜೂ.02: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಬೆನ್ನಲ್ಲೇ ಇದೀಗ ಪೊಲೀಸರು ಹಿಂದೂ ಮುಖಂಡರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಈ ಕಠಿಣ ಕ್ರಮದ ಭಾಗವಾಗಿ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ಜಾರಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಮಾಡಿ ನೋಟಿಸ್ನಲ್ಲಿ ಆದೇಶಿಸಲಾಗಿದೆ.