ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ದ.ಕ. ಪೊಲೀಸರಿಂದ ವಿಶೇಷ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.02. ಜಿಲ್ಲೆಯಲ್ಲಿ ವಿವಿಧ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಕಡಬದ ಓರ್ವ ವ್ಯಕ್ತಿ ಸೇರಿದಂತೆ 36 ಮಂದಿಯ ಗಡೀಪಾರು ಮಾಡುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಕಾನೂನು ಪ್ರಕ್ರಿಯೆ ಆರಂಭಗೊಂಡಿದೆ.

ಕಡಬ ಠಾಣಾ ವ್ಯಾಪ್ತಿಯ ಮಹಮ್ಮದ್ ನವಾಝ್(32) ಸೇರಿದಂತೆ ಜಿಲ್ಲೆಯ ವಿವಿಧ ಸಂಘಟನೆಗಳಿಗೆ ಸೇರಿದ 36 ಮಂದಿಯ ಲಿಸ್ಟನ್ನು ಈಗಾಗಲೇ ತಯಾರಿಸಲಾಗಿದ್ದು, ಕಾನೂನು ಪ್ರಕ್ರಿಯೆ ಆರಂಭಗೊಳಿಸಿರುವುದಾಗಿ ಪೊಲೀಸ್ ಇಲಾಖೆಯು‌ ಪ್ರಕಟಣೆಯಲ್ಲಿ ತಿಳಿಸಿದೆ.

 

 

Scroll to Top