ಬೆಂಗಳೂರಿನಲ್ಲಿ ರಸ್ತೆ ಅಪಘಾತ, ಬೈಕ್‌ಗಳು ಗುದ್ದಿಕೊಂಡು ಸವಾರರಿಬ್ಬರ ಸಾವು

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಬೆಂಗಳೂರಿನ ಹೃದಯ ಭಾಗದಲ್ಲಿ ಒಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಕೆ.ಆರ್. ಮಾರುಕಟ್ಟೆ ಪ್ಲೈಓವರ್‌ನಲ್ಲಿ ಎರಡು ಬೈಕುಗಳ ನಡುವೆ ಡಿಕ್ಕಿಯಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಕಾಶ್ ಹಾಗೂ ಅಫ್ಜಲ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅತಿ ವೇಗ ಹಾಗೂ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಬೈಕ್‌ಗಳು ಗುದ್ದಿಕೊಂಡ ತೀವ್ರತೆಗೆ ಇಬ್ಬರೂ ಚಿಮ್ಮಿ ರಸ್ತೆಗೆ ಬಿದ್ದಿದ್ದು, ತಲೆ ನೆಲಕ್ಕೆ ಅಪ್ಪಳಿಸಿದೆ. ಹೆಲ್ಮೆಟ್‌ ಧರಿಸಿರಲಿಲ್ಲದ ಕಾರಣ ಬಲವಾಗಿ ಏಟು ಬಿದ್ದು ಇಬ್ಬರೂ ಮರಣ ಹೊಂದಿದ್ದಾರೆ ಎಂದು ತಿಳಿಸಲಾಗಿದೆ.

Scroll to Top