ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಬೆಂಗಳೂರು, ಜೂನ್ 3: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಕುಮಟಾ, ಅಂಕೋಲಾ, ಹೊನ್ನಾವರ, ಮಂಕಿ, ಮಂಗಳೂರು, ಯಲ್ಲಾಪುರ, ಶಕ್ತಿನಗರ, ಮುಲ್ಕಿ, ಆಗುಂಬೆ, ಕಮ್ಮರಡಿ, ಕೊಟ್ಟಿಗೆಹಾರ, ಭಾಗಮಂಡಲ, ಗೇರುಸೊಪ್ಪ, ಕೋಟಾ, ಕಾರ್ಕಳ, ಕುಂದಾಪುರ, ಉಪ್ಪಿನಂಗಡಿ, ಸಿದ್ದಾಪುರ, ಬಂಟವಾಳ, ಜೋಯಿಡಾ, ಲೋಂಡಾ, ಚಿಕ್ಕೋಡಿ, ಕೊಪ್ಪ, ಎನ್​ಆರ್​ಪುರ, ಕಳಸ, ಹುಂಚದಕಟ್ಟೆ, ತ್ಯಾಗರ್ತಿ, ಮಧುಗಿರಿಯಲ್ಲಿ ಮಳೆಯಾಗಿದೆ.

ಆರು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ.

Scroll to Top