(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ಉಂಟಾಗಿ ಚಾಲಕ ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ಕೊಕ್ಕಡ ಸಮೀಪದ ಕೆಂಪಕೋಡಿನಲ್ಲಿ ಸಂಭವಿಸಿದೆ.


ಕೆಂಪಕೋಡು ನಿವಾಸಿ ಶರತ್ ಕುಮಾರ್ ಕೆ (36) ಮೃತ ಚಾಲಕ. ಶರತ್ ಕುಮಾರ್ ಅವರು ಪ್ರತಿದಿನದಂತೆ ಇಂದು ಬೆಳಗ್ಗೆಯೂ ತಮ್ಮ ಆಟೋದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಬಿಟ್ಟು ವಾಪಾಸ್ಸಾಗುತ್ತಿದ್ದರು. ಈ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ರಿಕ್ಷಾ ಚಲಾಯಿಸುತ್ತಿರುವಾಗಲೇ ಸಾವನ್ನಪ್ಪಿದ್ದಾರೆ. ಕೂಡಲೇ ಗಮನಿಸಿದ ಸ್ಥಳೀಯರು ಶರತ್ ಅವರನ್ನು ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಆದರೆ, ಅದಾಗಲೇ ಅವರು ನಿಧನ ಹೊಂದಿರುವುದಾಗಿ ವೈದ್ಯರು ತಿಳಿಸಿದ್ದಾರೆ.









