ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಇನ್ನೋರ್ವ ಆರೋಪಿಯ ಬಂಧನ



(ನ್ಯೂಸ್ ಕಡಬ) newskadaba.com ಜೂ:04, ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.







ದಿನಾಂಕ: 01-05-2025 ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಜೊತೆ ಸೇರಿಕೊಂಡು ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಗಳು ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ ಆರೋಪಿ  ಮಂಗಳೂರಿನ ಶಾಂತಿಗುಡ್ಡೆಯ ಬಜಪೆಯ ಅಬ್ದುಲ್ ರಜಾಕ್ (59) ಎಂಬಾತನನ್ನು ಬಂದಿಸಲಾಗಿದೆ. ಈತನು ಪ್ರಕರಣದಲ್ಲಿನ ಪ್ರಮುಖ ಆರೋಪಿಗಳ ಪೈಕಿ ತನ್ನ ಮಗ ಮೊಹಮ್ಮದ್ ಮುಜಾಂಮ್ಮಿಲ್ ಮತ್ತು ಮಗಳ ಗಂಡ ನೌಷದ್ ವಾಮಂಜೂರು / ಚೊಟ್ಟೆ ನೌಷದ್ ಹಾಗೂ ಇತರ ಆರೋಪಿಗಳ ಜೊತೆ ಸೇರಿ ತನ್ನ ಮನೆಯಲ್ಲಿ ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಯು ತಲೆ ಮರೆಸಿಕೊಳ್ಳಲು ಸಹಕರಿಸಿದ್ದಾನೆ ಎಂದು ತಿಳಿದು ಬಂದಿದೆ.






ಈ ಕೊಲೆ ಪ್ರಕರಣದ ತನಿಖೆಯು ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

error: Content is protected !!
Scroll to Top