ಕಾಣಿಯೂರಿನಲ್ಲಿ 42 ನೇ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

(ನ್ಯೂಸ್ ಕಡಬ) newskadaba.com ಸವಣೂರು, ಎ.3. ಮನುಷ್ಯ ಉತ್ತಮ ಸಂಸ್ಕಾರದಿಂದ ಬದುಕಬೇಕಾದರೆ ಭಜನೆ, ಪೂಜೆ ಪುರಸ್ಕಾರಗಳನ್ನು ಮಾಡಬೇಕು. ಕಲಿಯುಗದಲ್ಲಿ ಶ್ರೀ ಸತ್ಯನಾರಾಯಣ ದೇವರು ಹಾಗು ನರಸಿಂಹ ದೇವರ ಆರಾಧನೆ ಮಾಡಿದಾಗ ವಿಶೇಷ ಅನುಗ್ರಹ ಸಿಗುತ್ತದೆ ಎಂದು ಶ್ರೀ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ಅವರು ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಆಶ್ರಯದಲ್ಲಿ ನಡೆದ 42 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯಲ್ಲಿ ಆಶೀರ್ವಚನ ನೀಡಿದರು. ದೇವರನ್ನು ಸಾಮೂಹಿಕವಾಗಿ ಆರಾಧಿಸಿದಾಗ ಭಗವಂತನ ವಿಶೇಷ ಅನುಗ್ರಹ ಸಿಗುತ್ತದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಮಂದಿರಕ್ಕೆ ಕೊಡುಗೆ ನೀಡಿದ ಶ್ರೀ ಚಿದಾನಂದ ಉಪಾಧ್ಯಾಯ ಕಲ್ಪಡ ಇವರನ್ನು ಸ್ವಾಮೀಜಿಯವರು ಗೌರವಿಸಿದರು. ಮಂಡಳಿಯ ಅಧ್ಯಕ್ಷ ಪರಮೇಶ್ವರ ಅನಿಲ ಉಪಸ್ಥಿತರಿದ್ದರು. ಮಂಡಳಿಯ ಕಾರ್ಯದರ್ಶಿ ಸುರೇಶ್ ಓಡಬಾಯಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಅನಂತರಾಮ ಉಪಾಧ್ಯಾಯ ಮತ್ತು ಪದ್ಮನಾಭ ಭಟ್ ಕಟ್ಟತ್ತಾರು ಪೂಜಾ ವಿಧಿವಿಧಾನ ನಡೆಸಿಕೊಟ್ಟರು.ಆಶೀರ್ವಚನದ ಬಳಿಕ  ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.
error: Content is protected !!
Scroll to Top