ಇನ್ಮುಂದೆ ವಾರದ 6 ದಿನ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ : ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com, ಜೂ.06. ಬೆಂಗಳೂರು : ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ದೃಷ್ಟಿಯಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ ಅಥವಾ ಬಾಳೆಹಣ್ಣನ್ನು ವಾರದಲ್ಲಿ ಆರು ದಿನ ನೀಡುವುದಾಗಿ ರಾಜ್ಯ ಸರಕಾರ ಆದೇಶಿಸಿದೆ.

 

ಗುರುವಾರ ಈ ಸಂಬಂಧ ಆದೇಶ ಹೊರಡಿಸಿದ್ದು, ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ ಅಥವಾ ಬಾಳೆಹಣ್ಣು ನೀಡಲಾಗುತ್ತದೆ ಎಂದು ತಿಳಿಸಿದೆ.

Scroll to Top