ವಿಶ್ವದ ಅತಿ ಎತ್ತರದ ಕಮಾನು ರೈಲ್ವೆ ಸೇತುವೆ: ಪ್ರಧಾನಿ ಮೋದಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಜೂ.06. ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸಿಎಂ ಒಮರ್ ಅಬ್ದುಲ್ಲಾ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡ ಉಪಸ್ಥಿತರಿದ್ದರು. ಚೆನಾಬ್ ಸೇತುವೆಯ ನಂತರ, ಜಮ್ಮು- ಕಾಶ್ಮೀರದಲ್ಲಿ ಅಂಜಿ ನದಿಯ ಮೇಲೆ ನಿರ್ಮಿಸಲಾದ ದೇಶದ ಮೊದಲ ಕೇಬಲ್-ಸ್ಟೇಡ್ ರೈಲು ಸೇತುವೆ ಇದಾಗಿದೆ. ಈ ಕಾರ್ಯಕ್ರಮ ನಂತರ ಪ್ರಧಾನಿಯವರು ಕತ್ರಾದಿಂದ ಶ್ರೀನಗರಕ್ಕೆ ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ (USBRL) ದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ ತೋರಲಿದ್ದಾರೆ.

error: Content is protected !!
Scroll to Top