ಕಾಲ್ತುಳಿತ ಪ್ರಕರಣ- ಜೂನ್ 12ಕ್ಕೆ ವಿಚಾರಣೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಜೂ. 10. ಆರ್ ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಳ್ಳಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಇಂದು ನಡೆಯಿತು. ಘಟನೆಗೆ ಸಂಬಂಧಪಟ್ಟಂತೆ ವಸ್ತುಸ್ಥಿತಿ ವರದಿಯನ್ನು ಜೂ. 12ರಂದು ಮುಚ್ಚಿದ ಲಕೊಟೆಯಲ್ಲಿ ನೇರವಾಗಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದೆ. ವಿಚಾರಣೆ ಪ್ರಾರಂಭವಾಗುತ್ತಿದ್ದಂತೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ನಮ್ಮ ಪ್ರತಿಕ್ರಿಯೆಯನ್ನು ನಾವಿನ್ನೂ ಸಲ್ಲಿಸಿಲ್ಲ. ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಚಿಸಲಾಗಿದ್ದು, ಅದು ವರದಿ ನೀಡಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ವಾದಿಸಿದರು. ಘಟನೆಗೆ ಸಂಬಂಧಿಸಿ ಬೆಂಗಳೂರು ನಗರ ಯುಕ್ತರು ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

Scroll to Top