ಮರಗಳ ತೆರವು: ಜೂನ್ 17 ರಂದು ಅಹವಾಲು ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಬೆಳ್ತಂಗಡಿ ತಾಲೂಕು ಕಸಬಾ ಗ್ರಾಮದ ಬೆಳ್ತಂಗಡಿ ತಾಲೂಕಿನ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಕಾದಿರಿಸಿದ ಜಮೀನಿನಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಡಚಣೆಯಾಗಿರುವ 50ಕ್ಕಿಂತ ಹೆಚ್ಚು ಮರಗಳನ್ನು ಗುರುತಿಸಿದ್ದು, ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ ನಿಯಮಗಳನ್ವಯ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮುಂದಿನ ಕ್ರಮ ಕೈಗೊಳ್ಳಬೇಕಾಗುತ್ತದೆ.

ಜೂನ್ 17ರಂದು  ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ವನ್ಯಜೀವಿ ವಲಯದ ವಲಯ ಅರಣ್ಯ ಅಧಿಕಾರಿ ಕಛೇರಿ ಆವರಣದಲ್ಲಿ ಸಾರ್ವಜನಿಕ ಅಹವಾಲು ಸಭೆ ಕರೆಯಲಾಗಿದೆ. ಈ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ ಸಭೆಯಲ್ಲಿ ಹಾಜರಾಗಿ ಆಕ್ಷೇಪಣೆಯನ್ನು ಸಲ್ಲಿಸಬಹುದು ಎಂದು  ಮಂಗಳೂರು ವೃಕ್ಷಾಧಿಕಾರಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top