ಪುತ್ತೂರು: ಕೆಎಸ್ಸಾರ್ಟಿಸಿ ಬಸ್ ಗೆ ಕಲ್ಲು ತೂರಾಟ ಪ್ರಕರಣ ► ಮೂವರು ಆರೋಪಿಗಳು ಖುಲಾಸೆ

(ನ್ಯೂಸ್ ಕಡಬ) newskadaba.com ಪುತ್ತೂರು, ಎ.04. ಬೆಂಗಳೂರಿನಲ್ಲಿ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರ ಮುಖಕ್ಕೆ ಮಸಿ ಬಳಿದ ಪ್ರಕರಣವನ್ನು ಖಂಡಿಸಿ ಕರ್ನಾಟಕ ಬಂದ್‍ಗೆ ಕರೆ ನೀಡಿದ್ದ ಸಂದರ್ಭದಲ್ಲಿ ಕೆಎಸ್ಸಾರ್ಟಿಸಿ ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ನ್ಯಾಯಾಲಯವು ದೋಷಮುಕ್ತಗೊಳಿಸಿ ಆದೇಶಿಸಿದೆ.

2012 ರಲ್ಲಿ ಶ್ರೀರಾಮಸೇನೆಯ ಸಂಸ್ಥಾಪಕರಾದ ಪ್ರಮೋದ್ ಮುತಾಲಿಕ್ ಬೆಂಗಳೂರಿನ ಟಿ.ವಿ. ಚಾನೆಲೊಂದರ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದ ವೇಳೆ ಅವರ ಮುಖಕ್ಕೆ ಗುಂಪೊಂದು ಮಸಿ ಬಳಿದಿತ್ತು. ಈ ಪ್ರಕರಣವನ್ನು ಖಂಡಿಸಿ ಕರ್ನಾಟಕ ಬಂದ್‍ಗೆ ಶ್ರೀರಾಮಸೇನೆ ಕರೆ ನೀಡಿದ್ದ ವೇಳೆ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದಕ್ಕೆ ಕಲ್ಲು ತೂರಾಟ ನಡೆಸಿ ಹಾನಿ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಸಂದರ್ಭದಲ್ಲಿ ಶ್ರೀರಾಮಸೇನೆಯ ಸಂಚಾಲಕರಾಗಿದ್ದ ಅರುಣ್ ಕುಮಾರ್ ಪುತ್ತಿಲ, ಆಗ ಶ್ರೀರಾಮ ಸೇನೆಯ ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ನವೀನ್ ಪಡ್ನೂರು ಮತ್ತು ನಾರಾಯಣ ಮುಂಡಾಜೆ ಅವರನ್ನು ಆರೋಪಿಗಳಾಗಿ ಗುರುತಿಸಿ ನಗರ ಠಾಣಾ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Also Read  ಬಂಟ್ವಾಳ: ವಿಪರೀತ ಮಳೆ- ಬಿರುಕುಬಿಟ್ಟ ಮನೆ ಗೋಡೆ..!!

ತನಿಖೆಯನ್ನು ಪೂರ್ಣಗೊಳಿಸಿದ ಪುತ್ತೂರು ನ್ಯಾಯಾಲಯವು ಮೂವರು ಆರೋಪಿಗಳನ್ನು ದೋಷಮುಕ್ತಗೊಳಿಸಿ ಸೋಮವಾರದಂದು ಆದೇಶ ನೀಡಿದೆ.

error: Content is protected !!
Scroll to Top