ರಾಜ್ಯದಲ್ಲಿ ಜೂನ್ 12 ಮತ್ತು 13ರಂದು ಭಾರೀ ಮಳೆ ಮುನ್ಸೂಚನೆ; ರೆಡ್ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 11. ಹವಾಮಾನ ಇಲಾಖೆಯ ವರದಿ ಪ್ರಕಾರ ಜೂನ್ 12 ಮತ್ತು ಜೂನ್ 13ರಂದು ರಾಜ್ಯ ರಾಜಧಾನಿ ಸೇರಿದಂತೆ ಸುಮಾರು 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಎಲ್ಲಾ ಜಿಲ್ಲೆಗಳಿಗೆ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಮಳೆ ಆರ್ಭಟ ಇರಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂ. ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ಬೀದರ್‍ನಲ್ಲಿ ಜೂ.12ರಿಂದ ಮುಂದಿನ 2 ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಅವಧಿಯಲ್ಲಿ 110 ಮಿ.ಮೀ.ನಿಂದ 200ಮಿ.ಮೀ.ವರೆಗೆ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ಜೂನ್ 11ರಂದು ಬಹುತೇಕ ಯೆಲ್ಲೋ ಅಲರ್ಟ್ ಇರಲಿದ್ದು ಜೂನ್ 12 ಹಾಗೂ 13 ಮಾತ್ರ ರೆಡ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

error: Content is protected !!
Scroll to Top