ಕರ್ತವ್ಯಕ್ಕೆ ಅಡ್ಡಿ- ಮಾಜಿ ಶಾಸಕ ಮೊಯ್ದೀನ್ ಬಾವಾ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಜೂ. 11. ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ‌ ಶಾಸಕ ಮೊಯ್ದೀನ್ ಬಾವಾ ಮತ್ತು ಅವರ ಸಹಚರರ ವಿರುದ್ದ ಪ್ರಕರಣ ದಾಖಲಾದ ಕುರಿತು ವರದಿಯಾಗಿದೆ.

ಮಾಜಿ ಶಾಸಕ ಮೊಯಿದ್ದೀನ್ ಬಾವಾರವರು ಅವರ ಇಬ್ಬರು ಸಹಚರರೊಂದಿಗೆ ಕಾಮಗಾರಿಯ ಬಿಲ್ಲನ್ನು ಮಂಜೂರು ಮಾಡುವ ವಿಷಯದ ಕುರಿತಾಗಿ ಎನ್ಎಂಪಿಎ ಕಛೇರಿಯ ಡೆಪ್ಯೂಟಿ ಚೇರ್ ಪರ್ಸನ್ ರವರ ಕಛೇರಿಗೆ ನುಗ್ಗಿ 15 ನಿಮಿಷ ಕಾಲ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಅವರನ್ನು ಕಛೇರಿಯಿಂದ ಹೊರಗೆ ಹೋಗಲು ಅವಕಾಶ ನೀಡದೇ, ಅವರನ್ನು ತಡೆದು ನಿಲ್ಲಿಸಿದ್ದಾರೆ. ನಂತರ ಅವರು ಹೊರಗೆ ಬಂದಾಗಲೂ ಅವರನ್ನು ಹಿಂಬಾಲಿಸುತ್ತಾ ಬೆದರಿಕೆ ಹಾಕಿ ಕಿರುಚುತ್ತಾ ಬಂದಿದ್ದು, ಕಾರಿನಲ್ಲಿ ಹೋಗುತ್ತಿರುವಾಗ ಕಾರನ್ನು ಸಹ ತಡೆದು ನಿಲ್ಲಿಸಿ, ವಾದ-ವಿವಾದ ಮಾಡಿರುವ ಬಗ್ಗೆ ಎನ್ಎಂಪಿಎ ಸೆಕ್ರೆಟರಿ ನೀಡಿದ ದೂರಿನಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 60/2025 ಕಲಂ 224,221,132, 126, 127, 226 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿದೆ.

error: Content is protected !!
Scroll to Top