(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.12. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವ ಸಂಭವವಿದ್ದು, ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.