(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ) ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳ ಮಹಿಳಾ ಮತ್ತು ಪುರುಷ ಯುವ ಜನರಿಗೆ 90 ದಿನಗಳ ಹಾಸ್ಟೆಲ್ ಸೌಲಭ್ಯದೊಂದಿಗೆ ಪೋಲಿಸ್ ಸಬ್ ಇನ್ಸ್ ಪೆಕ್ಟರ್(ಪಿ.ಎಸ್.ಐ) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವೆಬ್ ಸೈಟ್ https://sevasindhuservices.karnataka.gov.in/ ಅಥವಾ www.dom.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 15ರವರೆಗೆ ಅವಧಿ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಪದವಿಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳ ಸಾಮಾನ್ಯ ಅರ್ಹತೆ ಮತ್ತು ಇತರ ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್ ಸೈಟ್ https://dom.karnataka.gov.in/ ಅಥವಾ ಸಹಾಯವಾಣಿ: 8277799990 ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




