ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. 2025-26ನೇ ಸಾಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಗಳ ವಿವರ:- ಸ್ವಯಂ ಉದ್ಯೋಗ ವ್ಯಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವತಂತ್ರ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ.

ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಮಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್‍ ಸೈಟ್ www.dbcdc.karnataka.gov.in ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 8050770004 ಅಥವಾ 8050770005 ಸಂಪರ್ಕಿಸಬಹುದು ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top