ಆಟೋ ರಿಕ್ಷಾಕ್ಕೆ ಬಸ್ ಢಿಕ್ಕಿ- ಪ್ರಯಾಣಿಕ ಮೃತ್ಯು..!

(ನ್ಯೂಸ್ ಕಡಬ) newskadaba.com ಜೂ. 12. ಆಟೋ ರಿಕ್ಷಾಕ್ಕೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೊರ್ವ ಮೃತಪಟ್ಟು, ರಿಕ್ಷಾ ಚಾಲಕ ಸಹಿತ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಗುರುವಾರ ಪಡುಬಿದ್ರಿ ಕಾಂಜರಕಟ್ಟೆಯಲ್ಲಿ‌ ನಡೆದಿದೆ.

ಗಾಯಗೊಂಡವರನ್ನು ಅಟೊ ಚಾಲಕ ಕಂಚಿನಡ್ಕ ನಿವಾಸಿ‌ ಹಂಝ ಎಂದು ಗುರುತಿಸಲಾಗಿದೆ. ಬಸ್ ಢಿಕ್ಕಿ ಹೊಡೆದ ಪರಿಣಾಮ‌ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಪಡುಬಿದ್ರಿ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!
Scroll to Top