(ನ್ಯೂಸ್ ಕಡಬ) newskadaba.com ಗುಜರಾತ್, ಜೂ.12. ಸುಮಾರು 242 ಜನರನ್ನು ಹೊತ್ತ ವಿಮಾನವೊಂದು ಟೇಕ್ ಆಫ್ ವೇಳೆ ಪತನಗೊಡಿರುವ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ.
ಅಹಮ್ಮದಾಬಾದ್ ನ ಮೇಘನಿ ನಗರ ಪ್ರದೇಶದಲ್ಲಿ ಸುಮಾರು 242 ಜನರನ್ನು ಹೊತ್ತ ವಿಮಾನ ಟೇಕ್ ಆಫ್ ವೇಳೆ ಪತನಗೊಡಿದೆ. ನೂರಕ್ಕೂ ಅಧಿಕ ಮಂದಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದ್ದು, ಸ್ಥಳದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಅಹಮ್ಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್ ಗೆ ತೆರಳುತ್ತಿದ್ದ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ಪತನಗೊಂಡಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ತುರ್ತು ಪ್ರತಿಕ್ರಿಯೆ ತಂಡಗಳನ್ನು ನಿಯೋಜಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.