ವಿಮಾನ ಪತನ- ಮಂಗಳೂರು ಮೂಲದ ಕ್ಲೈವ್ ಕುಂದರ್ ವಿಧಿವಶ

(ನ್ಯೂಸ್ ಕಡಬ) newskadaba.com ಜೂ. 13. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಏರ್ ಇಂಡಿಯಾ ವಿಮಾನ ಪತನಗೊಂಡ ದುರಂತದಲ್ಲಿ ವಿಮಾನದಲ್ಲಿದ್ದ 242 ಮಂದಿ ಪ್ರಯಾಣಿಕರ ಪೈಕಿ ಮಂಗಳೂರು ಮೂಲದ ಮುಂಬೈ ನಿವಾಸಿ ಕೋ ಪೈಲಟ್ ಕ್ಲೈವ್ ಕುಂದರ್ ಅವರು ಕೂಡಾ ಒಬ್ಬರಾಗಿದ್ದರು.

ಪ್ಯಾರಿಸ್ ಏರ್ ಇಂಕ್‌ ನಲ್ಲಿ ತರಬೇತಿ ಪಡೆದಿದ್ದ ಕ್ಲೈವ್ ಕುಂದರ್ ಅವರು, 1,100 ಗಂಟೆಗಳ ಹಾರಾಟದ ಅನುಭವ ಹೊಂದಿದ್ದರು. 8,200ಕ್ಕೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದ ಲೈನ್ ಟ್ರೈನಿಂಗ್ ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಅವರಿಗೆ ಸಹಾಯ ಮಾಡುತ್ತಿದ್ದರು. ಬೋಯಿಂಗ್ 787 ವಿಮಾನವು ಗುರುವಾರ ಮಧ್ಯಾಹ್ನದ ವೇಳೆಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿತ್ತು. ಇದಾದ ಆದ ಮೂರ್ನಾಲ್ಕು ನಿಮಿಷಗಳಲ್ಲೇ ಪೈಲಟ್ ‘ಮೇ ಡೇ.. ಮೇ ಡೇ..’ ಎಂದು ಎಟಿಸಿಗೆ ಕೊನೆಯ ಸಂದೇಶ ಕೊಟ್ಟಿದ್ದರು. ಮೇ ಡೇ ಅಂದ್ರೆ ವಿಮಾನ ಡೇಂಜರ್‌ನಲ್ಲಿದ್ದು ತುರ್ತು ಅವಶ್ಯಕತೆ ಬಗ್ಗೆ ಎಮರ್ಜೆನ್ಸಿ ಕರೆ ಮಾಡುವುದು. ಎಟಿಸಿ ಮತ್ತೆ ಕರೆ ಮಾಡಿದಾಗ ವಾಪಸ್ ಪ್ರತಿಕ್ರಿಯೆ ಬಂದಿರಲಿಲ್ಲ. ಪೈಲಟ್ ಮೇ ಡೇ ಸಂದೇಶ ಕೊಟ್ಟ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿತ್ತು ಎನ್ನಲಾಗಿದೆ.

error: Content is protected !!
Scroll to Top