24 ಗಂಟೆ ಮುನ್ನವೇ ಸೀಟು ಖಾತರಿ- ರೈಲ್ವೇ ಇಲಾಖೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 13. ಟಿಕೆಟ್‌ ಕಾಯ್ದಿರಿಸಿದ ಪಟ್ಟಿಯಲ್ಲಿರುವ ಪ್ರಯಾಣಿಕರಿಗೆ ರೈಲು ಹೊರಡುವ 24 ಗಂಟೆಗಳ ಮುನ್ನವೇ ಸೀಟು ಹಂಚಿಕೆ ಮಾಡಿ, ಖಚಿತಪಡಿಸುವ ವ್ಯವಸ್ಥೆಯನ್ನು ರೈಲ್ವೇ ಸಚಿವಾಲಯ ಪ್ರಾಯೋಗಿಕವಾಗಿ ಜಾರಿಗೊಳಿಸಿದೆ.

ಇನ್ನು ರೈಲು ಹೊರಡುವ ನಾಲ್ಕು ಗಂಟೆಗಳ ಮೊದಲಷ್ಟೇ ಸೀಟು ಹಂಚಿಕೆ ಪಟ್ಟಿ ಪ್ರಕಟಿಸಲಾಗುತ್ತಿದೆ. ಕಾಯ್ದಿರಿಸಿದ ಪಟ್ಟಿಯಲ್ಲಿರುವ ಪ್ರಯಾಣಿಕರಿಗೆ ಆಸನಗಳನ್ನು ತ್ವರಿತವಾಗಿ ಖಚಿತಪಡಿಸುವ ಉದ್ದೇಶದಿಂದ ಹೊಸ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ ಎಂದು ರೈಲ್ವೆ ಸಚಿವಾಲಯ ಪ್ರಕಟಿಸಿದೆ. ಪ್ರಯಾಣಿಕರಿಂದ ಪಾಸಿಟಿವ್ ಪ್ರತಿಕ್ರಿಯೆ ವ್ಯಕ್ತವಾದಲ್ಲಿ ಈ ವ್ಯವಸ್ಥೆಯನ್ನು ರೈಲ್ವೆ ನೀತಿಯ ಭಾಗವಾಗಿಸಿ, ದೇಶದಾದ್ಯಂತ ಜಾರಿಗೆ ತರಲಾಗುವುದು ಎಂದು ತಿಳಿಸಿದೆ.

Also Read  ಕೃಷಿಕರಿಗೆ 6 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಏರಿಕೆ

ಸೀಟು ಕಾಯ್ದಿರಿಸಿ ಟಿಕೆಟ್‌ ಪಡೆದಿದ್ದರೂ, ಆಸನ ಹಂಚಿಕೆಯಾಗಿ, ಖಾತರಿಯಾಗದೇ ಇರುವುದರಿಂದ ತಮ್ಮ ಪ್ರಯಾಣದ ಬಗ್ಗೆ ಅನಿಶ್ಚಿತತೆ ಹೊಂದಿದ ಪ್ರಯಾಣಿಕರನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಇದರಿಂದ ಅವರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

error: Content is protected !!
Scroll to Top